text
stringlengths
0
61.5k
ಇವರೆಲ್ಲರ ತಲೆಯೊಳಗೆ ಹುಳ ಬಿಟ್ಟ ವಿಜಯ ಕಾಫೀ ಖರ್ಚಿನ ಮಜ ಪಡೆಯುತ್ತಿದ್ದ!!!
ಹಾಗಾದ್ರೆ ಹೋಗಿ ನೋಡು!! ಬೌದ್ಧರೂ ಜೈನರೂ ತಂತಮ್ಮ ಮತಗಳಿ ದೇವಾಲಯಗಳನ್ನು ಕಟ್ಟಿದ್ದಾರೋ ಇಲ್ಲವೋ ಅಂತ. ಅವರಲ್ಲೂ ಈಗ ಹಿಂದೂ ಧರ್ಮದಂತೆಯೆ ದೇವರಗಳಿದ್ದಾರೆ. ಬೌದ್ಧರು ಪಗೋಡಾಗಳನ್ನೂ, ಜೈನರು ಬಸದಿಗಳನ್ನೂ ಕಟ್ಟೀ, ಶಿಲ್ಪಕಲೆ ಬೆಳೆಸಿದ್ದಲ್ಲದೆ ಮೂರ್ತಿ ರೂಪದಲ್ಲಿ ಪೂಜಿಸಿ ಧನ್ಯತೆ ಕಾಣುತ್ತಿದ್ದಾರೆ. ನಾವಲ್ಲ ಮೂರ್ಖರು ,ನೀನು!!! ಪುಟ್ಟ ವಾದಿಸಿದ.
ವಿಷಯಾಂತರ ಆದರೆ ತನಗೆ ಸಿಗುವ ಮಜಾ ಕಡಿಮೆಯಾಗುವುದೆಂದು ಮಧ್ಯ ಬಂದ ವಿಜಯ, "ಅಲ್ಲ,, ವೇದಗಳಲ್ಲೂ ಮೂರ್ತಿ ಪೂಜೆ ಹೇಳಿಲ್ವಂತೆ. ಇದು ಹೇಗೆ ಶುರು ಆಯ್ತು? ವೇದಗಳು ದೇವರ ಬಾಯಿಯ ಮೂಲಕವೇ ಬಂದಿದ್ದರಿಂದ, ಮೂರ್ತಿ ಪೂಜೆ ಬಗ್ಗೆ ಅಲ್ಲಿ ಹೇಳಿಲ್ಲದ್ದರಿಂದ ಅನಂತಮೂರ್ತಿ, ದೇವರ ಮೂರ್ತಿಯ ಮೇಲೆ ಉಚ್ಚೆ ಮಾಡಿ ವೇದಗಳ ಪಾರಮ್ಯವನ್ನು ಸಾರಿರಬಹುದೇ???? ಕಿಚಾಯಿಸಿದ!!
ಚರ್ಚೆಯ ವಿಷಯ ವಿಷಮಸ್ಥಿತಿಗೆ ಹೋಗುತ್ತಿರುವುದನ್ನು ಗಮನಿಸಿದ, ಅಲ್ಲಿಯವರೆಗೂ ಸುಮ್ಮನೆ ಕುಳಿತಿದ್ದ ಸಂಜಯ ತನ್ನ ಮೌನಮುರಿದು ಮಾತನಾಡಿದ. ಯಾವಾಗಲೂ ,ಅಳೆದೂ-ಸುರಿದೂ, ತೂಕದ ಮಾತನಾಡುವ ಸಂಜಯನೆಂದರೆ ಆ ಗುಂಪಿನಲ್ಲಿ ಆದರ, ಪ್ರೀತಿ ಎಲ್ಲಾ ಇದ್ದವು. ತಕ್ಷಣವೇ ತಮ್ಮ ವಾದಗಳನ್ನು ನಿಲ್ಲಿಸಿ ಅವನೆಡೆಗೆ ತಿರುಗಿದರು.
ಸಂಜಯ ಹೇಳಿದ " ನೋಡಿ, ನೀವೆಲ್ಲಾ ವಿಷ್ಯಾಂತರ ಮಾಡುತ್ತಿದ್ದೀರಿ. ಅನಂತಮೂರ್ತಿ ಮಾಡಿದ ಮೂತ್ರ, ಅದರ ಬಹಿರಂಗ ಪ್ರಚಾರದ ಔಚಿತ್ಯ ಕುರಿತು ಚರ್ಚೆ ನಡೆಯುತ್ತಿರುವುದು. ಅದನ್ನು ಬಿಟ್ಟು ನಿಮ್ಮ ವಾದ ವಿವಾದ ಎಲ್ಲೆಲ್ಲೋ ಹೋಗುತ್ತಿದೆ. ಆದ್ರೂ ಅದನ್ನೂ ಪರಿಗಣಿಸಿ ನನಗೆ ತಿಳಿದಿದ್ದು ಹೇಳ್ತೀನಿ ಪರವಾಗಿಲ್ವಾ?? ಕೇಳಿದ.
ಹೇಳೂ…. ರಸಿಕನಾಡಿದ ಮಾತು ಶಶಿಯುದಿಸಿ ಬಂದಂತೆ
ರಸಿಕನಲ್ಲದನ ಬರಿಮಾತು ಕಿವಿಯೊಳಗೆ
ಕೂರ್ದಸಿಯ ಬಡಿದಂತೆ ಸರ್ವಜ್ಞ್ನ …. ಅಂತಲೇ ಇದೆಯಲ್ಲ. ಇವರುಗಳ ಒಣ ಮಾತಿಗಿಂತ ಕೂರ್ದಸಿ ಬೇಕಾಗಿಯೇ ಇಲ್ಲ,,… ಕಿಟ್ಟು ಹೇಳಿದ.
ಸಂಜಯ ಶುರು ಮಾಡಿದ,,"ಮೂರ್ತಿ ಪೂಜೆ ಹಿಂದೂ ಧರ್ಮದಲ್ಲಿ ಮಾತ್ರವಲ್ಲ, ಗ್ರೀಕ್ ಮತದಲ್ಲೂ, ದಕ್ಷಿಣ ಅಮೇರಿಕಾದ ಬುಡಕಟ್ಟುಗಲಲ್ಲೂ, ಈಜಿಪ್ಟಿನ ನಾಗರೀಕತೆಯಲ್ಲೂ ಇತ್ತು. ಅವುಗಳಿಗಿಂತ ಹಳೆಯದಾಗಿರಬಹುದಾದ ಹಿಂದೂ ಧರ್ಮವೊಂದೇ ಈಗ ಉಳಿದಿರುವುದು. ಕಾಲಾಂತರದಲ್ಲಿ ಅವುಗಳೆಲ್ಲಾ ಉಳಿದ ಧರ್ಮಗಳ ಆಕ್ರಮಣದಿಂದಲೋ, ಧರ್ಮಶ್ರದ್ಧೆ ನಶಿಸಿದ್ದರಿಂದಲೋ, ರಾಜಕೀಯ, ನೈಸರ್ಗಿಕ, ಕಾರಣಗಳಿಂದಲೋ ಅಳಿದು ಹೋಗಿವೆ. ಕಾಲಕ್ಕೂ ಹೊರಗಿನವರ ದೌರ್ಜನ್ಯ, ಅಕ್ರಮ, ಆಕ್ರಮಣ ಎದುರಿಸಿದರೂ, ಸಮರ್ಥವಾಗಿ ತನ್ನ ಅಸ್ತಿತ್ವ ಉಳಿಸಿಕೊಂದು ಬಂದಿರುವ ಹಿಂದೂ ಧರ್ಮದ ಬಗೆಗೆ , ಅದರ ಪರಂಪರೆಯ ಬಗೆಗೆ, ಮತ್ತೆ ಮತ್ತೆ ಪುಟಿದೆದ್ದು ವಿಶಾಲ ಭಾರತದ ಜನಸ್ತೋಮವನ್ನು ಒಂದು ನಂಬಿಕೆ,ಆಚರಣೆ, ಭಾವನಾತ್ಮಕವಾಗಿ ಒಗ್ಗೂಡಿಸಿಟ್ಟಿರುವುದರ ಬಗೆಗೆ ನಮಗೆ ಹೆಮ್ಮೆ ಇರಬೇಕು. ಇದು ನಮ್ಮ ಮೊದಲ ಆದ್ಯತೆಯಾಗಬೇಕು. ಇಂದು ಕನ್ಯಾಕುಮಾರಿಯಿಂದ ಕಾಶ್ಮೀರದಲ್ಲಿ, ಗುಜರಾತಿನಿಂದ, ಮಣಿಪುರ, ತ್ರಿಪುರಾಗಳಂಥ, ದೂರದ ರಾಜ್ಯಗಳಲ್ಲಿ ಜನರು ಅದೇ ದೇವರುಗಳನ್ನು, ನಂಬಿ ಪೂಜಿಸುತ್ತಿದ್ದಾರೆ. ಇದು ಅವರವರ ಭಾವ-ಭಕ್ತಿಗೆ ಅನುಸಾರವಾಗಿ ನಡೆದರೂ, ಅಂತರ್ಗಾಮಿಯಾಗಿರುವ ಈ ಭಾವನೆಗಳನ್ನು ಒಣ ವೈಚಾರಿಕತೆಯ ಮೂಲಕ ಭೇದಿಸಿ ಘಾಸಿಗೊಳಿಸಬಾರದೆಂದು ನನ್ನ ನಂಬಿಕೆ; ನಿಮಗೆ ಬೇಕಾದಂತೆ ನೀವು ತಿಳಿದುಕೊಳ್ಳಬಹುದು" ಎಂದಂದು, ಅವ್ರುಗಳ ಮುಖ ನೋಡಿದ. ಆಸಕ್ತಿಯಿಂದ ಕೇಳುತ್ತಿದ್ದರು.
ಇನ್ನು ಹಿಂದೂ ಧರ್ಮದಲ್ಲಿ ಮೂರ್ತಿಪೂಜೆ ಹೇಗೆ, ಯಾವಾಗ ಬಂತೆಂದು ಯಾರಿಗೂ ತಿಳಿಯದು,. ನಮಗೆ ಈಗ ಸಿಕ್ಕಿರುವ ವೇದಗಳು ಪೂರ್ಣಪ್ರಮಾಣದಲ್ಲಿದೆಯೆಂದು ನಮ್ಮ ನಂಬಿಕೆ. ಶೃತಿ-ಸ್ಮೃತಿಗಳ ಮೂಲಕ ಸಾವಿರಾರು ವರ್ಷಗಳಿಂದ ಬಂದಿರುವ ಇವುಗಳಲ್ಲಿ ಎಲ್ಲಿ ಹೇಗೆ ಬದಲಾವಣೆಗಳಾಗಿರಬಹುದೆಂಬುದು ನಮಗೆ ತಿಳಿಯದಾದರೂ, ವೇದಗಳು ವಿಶಿಷ್ಟ ಲಯ, ಛಂದಸ್ಸು, ವ್ಯಾಕರಣಗಳ ನಿಯಮಗಳ ಮೇಲೆ ಇರುವುದರಿಂದ ಅವು ಬದಲಾಗದೆ ಉಳಿದುಬಂದ ನಿಗಮ ಪಾಠಗಳೆನಿಸಿಕೊಂಡಿವೆ. ಅಮೂರ್ತ, ಶಕ್ತಿ-ದೇವ ದೇವತೆಗಳ ಮಂತ್ರಗಳು, ಪೂಜಾವಿಧಾನಗಳು ಇಲ್ಲಿವೆ. ಅವುಗಳಲ್ಲಿ ಆಯಾ ದೇವರುಗಳ ವರ್ಣನೆಯೂ ಇರಬಹುದು; ಅದನ್ನು ಅನುಸರಿಸಿ ಶಿಲ್ಪಕಲೆ ಬೆಳೆದಿರಬಹುದಾದರೂ, ಇದಕ್ಕೆ ಮಾನವನ ಪರಿಮಿತಿಯಲ್ಲಿ ಅನಧಿಕೃತ ವಿಶ್ಲೇಷಣೆ ನೀಡಿ ಅದನ್ನೇ ಸತ್ಯವೆಂದು ಸಾಧಿಸುವುದು ಸಾಧುವಲ್ಲ. ಮೂರ್ತಿಪೂಜೆಯ ಪ್ರಕ್ರಿಯೆ, ನಮಗೆ ತಿಳಿದಂತೆ ಸಾವಿರಾರು ವರ್ಷಗಳಿಂದ ನಡೆದುಬಂದಿದೆ. ವೇದಗಳ ಕಾಲದಲ್ಲೂ ಇದ್ದಿರಬಹುದು. ಜನರ, ಸಮಾಜದ,ಸಂಸ್ಕೃತಿಯ ಪ್ರತೀಕವಾಗಿ ಉಳಿದೂ ಬಂದಿದೆ. ಈ ಆಚರಣೆ ಕಾಲನ ಪರೀಕ್ಷೆಯನ್ನು ಗೆದ್ದು ಬಂದಿದೆ ಹಾಗೂ ಜನರಿಂದ ಮನ್ನಣೆ ದೊರೆತಿದೆ. ಹಾಗಾಗಿ ಪ್ರಜಾಪ್ರಭುತ್ವದ ದೃಷ್ಟಿಯಲ್ಲಿ ನೋಡಿದರೂ, ಬಹುಮತದ ಪ್ರಕಾರ ಗೌರವಿಸಬೇಕಾದ ಆಚರಣೆ. ಈ ಮೂರ್ತಿಗಳ ಕೆತ್ತನೆಯ ಕಲೆ ಇಂದು ನಮ್ಮ ಸಂಸ್ಕೃತಿಗೆ ಮೆರುಗೂ ತಂದು ಕೊಟ್ಟಿದೆ.ಈ ಅದ್ಭುತ ಸಾಹಿತ್ಯಿಕ ಹಾಗೂ ಮನೋವೈಚಾರಿಕ, ಕೃತಿಗಳ ಹಿಂದಿನ ಆಶಯ, ಭವ್ಯತೆಯನ್ನು ಪರಿಗಣಿಸಿದರೆ ಅವುಗಳ ಮಹತ್ವ ಅರಿವಾಗುತ್ತದೆ. ಒಂದು ದೇವತಾ ವಿಗ್ರಹದ ಮೇಲೆ ಮೂತ್ರ ಮಾಡಿದರೆ ಶಿಲ್ಪಿಯಿಂದ ಮೊದಲುಗೊಂಡು ಆಗಮಕರ್ತರ ಅವಮಾನ, ಅವಹೇಳನ ಮಾಡಿದಂತೆ. ಇದು ದೇವರ ಕುರಿತ ನಂಬಿಕೆಯ ಸತ್ಯಾಸತ್ಯತೆ ಪ್ರಶ್ನಿಸುವ ಕೇವಲ ಸಾಂಕೇತಿಕ ಕಾರ್ಯವಲ್ಲ; ಇದರ ವ್ಯಾಪ್ತಿ ದೊಡ್ಡದು'' ಎಂದು ಹೇಳಿದ. ಈ ಮೂರ್ತಿಗಳ ಗುಣ ಲಕ್ಷಣಗಳ ಬಣ್ಣನೆ ಆಗಮಗಳಲ್ಲಿ- ಅದರಲ್ಲೂ "ಪಂಚರಾತ್ರ" ಆಗಮಗಳಲ್ಲಿ ಅತಿ ಸೂಕ್ಷ್ಮ, ದೀರ್ಘ ಹಾಗೂ ಸವಿವರವಾಗಿ ಹೇಳಲ್ಪಟ್ಟಿದೆ. ಇದನ್ನು ದೇವರು ಐದು ರಾತ್ರಿಗಳಲ್ಲಿ ವಿವರಿಸಿದ ಎಂದು ನಂಬಲಾಗಿದೆ.ಈ ಮೂರ್ತಿ ಪೂಜೆಯ ಪ್ರಕ್ರಿಯೆಯು ಆಗಮಗಳ ರೂಪದಲ್ಲಿ ವಿವರಿಸಲ್ಪಟ್ಟು, ಯಜ್ಞಪ್ರಧಾನ ವೈದಿಕ (ವೇದ) ಆಚರಣೆಗೆ ಭಿನ್ನವಾಗಿ ಮೊದಲು ಅವೈದಿಕ ಸಂಪ್ರದಾಯದಂತೆ ಪ್ರಾರಂಭವಾದರೂ ಕಾಲಾಂತರದಲ್ಲಿ ವೈದಿಕ ಆಚರಣೆಗೆ ವಿಲೀನವಾಗಿದೆ ಎಂದೂ ನಂಬಲಾಗಿದೆ. ಅದೇನೇ ಇದ್ದರೂ ಕೋಟ್ಯಾಂತರ ಭಾರತೀಯ ಮನಸ್ಸುಗಳು ದೇವರ ,ಶಾಂತಿಯ ಸಾಕ್ಷಾತ್ಕಾರವನ್ನು ಮೂರ್ತರೂಪದಲ್ಲಿ ಪಡೆಯಲು ಮನಃಪೂರ್ವಕವಾಗಿ ಅಂಗೀಕರಿದ್ದರಿಂದಲೇ ಇದು ಇನ್ನೂ ಮುಂದುವರಿದಿದೆ ಎಂದು ನನ್ನ ಭಾವನೆ. ಇದಕ್ಕೆ ಸೌಜನ್ಯದಿಂದ ಗೌರವಕೊಟ್ಟರೆ ನಮ್ಮನ್ನು ಸಜ್ಜನ ಎಂದೆನ್ನಬಹುದು" ಎಂದು ದೀರ್ಘವಾಗಿ ಉಸಿರೆಳೆದ. ಉಳಿದವರು ನಿಶ್ಯಬ್ದವಾಗಿ ಆಲಿಸುತ್ತಿದ್ದರು.
ಮೂರ್ತಿ ಪೂಜೆ ಧಿಕ್ಕರಿಸಿದ ಜೈನ ಮತಗಳು, ಬೌದ್ಧ ಮತಗಳು ಕಾಲಾಂತರದಲ್ಲಿ ಅದನ್ನು ಅಂಗಿಕರಿಸಿ, ಬಸದಿಗಳನ್ನು, ಪಗೋಡಾಗಳನ್ನು ನಿರ್ಮಿಸಿ ಪೂಜೆ ಕೈ ಕೊಂಡಿವೆ.ಭಾರತೀಯ ಧರ್ಮಗಳೇ ಅದ ಇವುಗಳು ಮೊದಲಲ್ಲಿ ಮೂರ್ತಿಪೂಜೆ/ವೇದಗಳನ್ನು ನಿರಾಕರಿಸಿ ಉದಯಿಸಿದರೂ, ಮೂರ್ತಿಪೂಜೆಯನ್ನು ಅಳವಡಿಸ್ಕೊಂಡದ್ದು, ಮೂರ್ತಿ ಪೂಜೆಯನ್ನು ಕುರಿತಾಗಿ ಭಾರತೀಯರ ಮನದಲ್ಲಿನ ಭಾವನಾತ್ಮಕ ಬೆಸುಗೆಯನ್ನು ತಿಳಿಸುತ್ತದೆ.
'ಮೂರ್ತಿ ಪೂಜೆಯ ಹೆಸರಿನಲ್ಲಿ ಸಲಿಗೆ, ಮೂಢನಂಬಿಕೆ,ಆ ಮೂಲಕ ಶೋಷಣೆ ಇತ್ಯಾದಿಗಳು ತಪ್ಪಲವೋ?' ಶೀನ ಕೇಳಿದ.
'ಹೌದು, ಅದು ತಪ್ಪು ಎನ್ನುವುದು ನಿರ್ವಿವಾದ.ಇದು ಮಾನವನ ದುರಾಸೆಯ, ಸುಲಭ ಮಾರ್ಗದಲ್ಲಿ ಸಂಪತ್ತು ಗಳಿಸುವ ಮನೋಪ್ರವೃತ್ತಿಯ ಫಲವೇ ಹೊರತು, ಮೂರ್ತಿಪೂಜೆಯದ್ದಲ್ಲ. ಈ ಇಲ್ಲದಿದ್ದರೆ ಬೇರೊಂದು ನೆಪದಲ್ಲಿ ಅದು ಸಾಕಾರವಾಗುತ್ತದೆಯಷ್ಟೇ. ಮೂರ್ತಿಪೂಜೆ ಮಾಡದ ಸಂಸ್ಕೃತಿಯಲ್ಲೂ, ದೇವರ, ಧರ್ಮದ, ರಾಜಕೀಯ, ವರ್ಗ,ಸಾಮಾಜಿಕ, ನೈತಿಕ ಕಾರಣಗಳನ್ನು ಕೊಡುತ್ತಾ ಒಂದು ವರ್ಗ ಇನ್ನೊಂದನ್ನು ಶೋಷಿಸುತ್ತಲೇ ಬರುತ್ತಿದೆ. ಮಾನವರಲ್ಲಿ ಬಲಿಷ್ಟ ಹಾಗೂ ದುರ್ಬಲ ವರ್ಗಗಳು ಎಲ್ಲಾ ಕಾಲದಲ್ಲೂ ಇದ್ದೇ ಇರುತ್ತವೆ. ಶಕ್ತಿ ಇರುವವರು ಇಲ್ಲದವರನ್ನು ತುಳಿಯುವುದೇ ಮೂಲ ಕಾರಣ.. ದೇವಾಲಯಗಳು, ಧಾರ್ಮಿಕಾಚರಣೆಗಳು ಜನಪದವನ್ನು ಭಾವನಾತ್ಮಕವಾಗಿ ಸೇರಿಸುವ, ಸಾಮೂಹಿಕ ವೈಭವಾಚರಣೆಗಳ ಮೂಲಕ ಸಾಂಸ್ಕೃತಿಕವಾಗಿ ಬೆಸೆಯುವ ಮೂಲ ಆಶಯವನ್ನೇ ಹೊಂದಿವೆ . ಶಿಲ್ಪ ಕಲೆ, ಸಾಹಿತ್ಯ, ಸಂಗೀತ ಎಲ್ಲವುಗಳಲ್ಲಿ ಬರುವ ದೇವರ ವರ್ಣನೆಯನ್ನು ಸಾಕ್ಷಾತ್ಕರಿಸುವುದೇ ಈ ಪರಂಪರೆಯ ಉದ್ದೇಶ. ಇದಿಲ್ಲದಿದ್ದರೆ, ಕರ್ನಾಟಕ ಸಂಗೀತದ ಯಾವ ಹಾಡೂ ಜನರಿಗೆ ಸಾಕ್ಷಾತ್ಕಾರ ಒದಗಿಸದು.ನಮ್ಮ ಅಖಂಡ ಭಾರತವು ಭಾವನಾತ್ಮಕವಾಗಿ ಒಂದೇ ಸತ್ತೆಯ ಕೆಳಗೆ ಇಂದು ಇರುವುದೂ ಈ ಕಾರಣಕ್ಕಾಗಿಯೇ '
'ಈ ದೇವಾಲಯಗಳು ದೇವದಾಸಿ ಪರಂಪರೆಯನ್ನು ಬೆಳೆಸಲಿಲ್ಲವೋ?' ಶೀನ ಮತ್ತೆ ಸವಾಲೆಸೆದ.
' ಜಗತ್ತಿನ ಅತಿ ಪುರಾತನವಾದ ವೃತ್ತಿಯೇ ವೇಶ್ಯಾವಾಟಿಕೆ ಎಂದು ಬಹಳಷ್ಟು ಸಂಶೋಧನೆಗಳು ಹೇಳುತ್ತವೆ. ಇದು ಮಾನವನ ವಿಕೃತ ಮನಸ್ಸಿನ ಸೃಷ್ಟಿಯೇ ಹೊರತು ದೇವಾಲಯಗಳ ತಪ್ಪಲ್ಲ'.
ಸಂಜಯ ಮತ್ತೆ ಮುಂದುವರಿಸಿದ. 'ನೀವೆಲ್ಲಾ ಆರು ಜನ ಕುರುಡರು ಒಂದು ಆನೆಯನ್ನು ಮುಟ್ಟಿ ಅದರ ಸ್ವರೂಪದ ವ್ಯಾಖ್ಯಾನ ಮಾಡಿದ್ದು ಕೇಳೇ ಇರುತ್ತೀರಿ ಹೌದೇ?' ಎಂದ.
'ಅದೇನು ಇನ್ನೂ ಒಂದ್ಸಾರಿ ಹೇಳಿ ಬಿಡು. ಈ ಗುಗ್ಗು ನನ್ಮಕ್ಕಳಿಗೆ ಎನ್ಗೊತ್ತೋ ಏನಿಲ್ಲವೋ ಯಾವೋನಿಗ್ಗೊತ್ತು ' ಅಂತ ಕಿಟ್ಟು ಹೇಳಿದ. ಶೀನ, ಪುಟ್ಟ, ವಿಜಯ ಎಲ್ಲರೂ ಅವನನ್ನು ದುರುಗುಟ್ಟಿಕೊಂಡು ನೋಡಿದರು. ಸಂಜಯ ನಕ್ಕ.
ಒಂದೂರಿನಲ್ಲಿ ಆರು ಜನ ಕುರುಡು ಸ್ನೇಹಿತರಿರುತ್ತಾರೆ. ಆನೆಯ ಹೆಸರು ಕೇಳಿರುತ್ತಾರೆಯೇ ವಿನಃ ಅದರ ನೈಜ ಅರಿವು ಅವರಿಗಿರುವುದಿಲ್ಲ. ಒಮ್ಮೆ ಅವರ ಊರಿಗೆ ಅನೆಯೊಂದು ಬರುತ್ತದೆ. ಎಲ್ಲರೂ ತರಾತುರಿಯಿಂದ ಅದರ ಸ್ಪರ್ಶಾನುಭವ ಪಡೆಯಲು ಹೋಗ್ತಾರೆ. ಸೊಂಡಿಲನ್ನು ಮುಟ್ಟಿದವ ಅದನ್ನು ಹಾವಿನಂತೆಯೆಂದೂ, ಕಿವಿಯನ್ನು ಮುಟ್ಟಿದವ, ಬಾಳೆ ಎಲೆಯಂತೆಯೆಂದೂ, ಕಾಲನ್ನು ಮುಟ್ಟಿದವ ಕಂಬದಂತಿರುವುದೆಂದೂ, ಹೊಟ್ಟೆಯನ್ನು ಮುಟ್ಟಿದವನಿದೆ ಅದು ಗೋಡೆಯೆಂದೂ, ಬಾಲವನ್ನು ಮುಟ್ಟಿ ಹಗ್ಗವೆಂದೂ ಹೇಳುತ್ತಾರೆ. ಅವರಾರಿಗೂ ಅದರ ನಿಜದ ಸ್ವರೂಪ ತಿಳಿಯುವುದೇ ಇಲ್ಲ. ಹೇಳಿದ್ದ ಮಾತನ್ನೂ ಕೇಳದೆ ತಮ್ಮ ತಮ್ಮಲೇ ಕಿತ್ತಾಡುತ್ತಾರೆ. ಇದೂ ಹಾಗೆಯೇ ;ದೇವರು, ಧರ್ಮ ನಂಬಿಕೆಗಳು ಅವರವರ ಭಾವಕ್ಕೆ, ಭಕುತಿಗೆ, ಸಂಸ್ಕಾರಕ್ಕೆ, ಪರಿಸರಕ್ಕೆ, ಅನುಗುಣವಾಗಿರುತ್ತವೆ. ಈ ಕಥೆಯಲ್ಲಿನ ಆರು ಜನ ಕುರುಡರು, ಪೂರ್ವ ಮತ್ತು ಉತ್ತರ ಮೀಮಾಂಸಾ ದರ್ಶನದಲ್ಲಿ ಜ್ಞ್ನಾನದ ಸಾಕ್ಷಾತ್ಕಾರಕ್ಕೆ ವಿವರಿಸುವ ಆರು ಪರೀಕ್ಷಕ ಗುಣಗಳ ಪ್ರತಿನಿಧಿಗಳು. ಪ್ರತಿ ಪರೀಕ್ಷಕ ಗುಣವೂ ತನ್ನಿಂತಾನೇ ಅಪೂರ್ಣ. ಯಾವುದೇ ವಿಚಾರವನ್ನು ಈ ಆರೂ ಪರೀಕ್ಷೆಗಳ ಮೂಲಕ ಸಮಗ್ರವಾಗಿ ವಿಶ್ಲೇಷಿಸಿದರಷ್ಟೇ ಸತ್ಯದ ಅರಿವಾಗುವುದು.ಹೀಗೆ ಪರೀಕ್ಷೆಗೊಳಪಟ್ಟು ಸಿದ್ಧವಾದ ಸತ್ಯವನ್ನು "ಪ್ರಮಾಣ" ಎನ್ನುವರು. ಪ್ರತ್ಯಕ್ಷ, ಅನುಮಾನ, ಉಪಮಾನ, ಶಬ್ದ, ಅರ್ಥಾಪತ್ತಿ ಮತ್ತು ಅನುಪಲಬ್ಧಿ ಎಂಬ ಈ ಆರೂ ಪ್ರಮಾಣಗಳನ್ನು ಬಳಸಿ ಸತ್ಯಾರ್ಥ ಶೋಧನೆ ನಡೆಸಬೇಕು.(ಭ್ರಮೆ ಎಂಬ ಪದಕ್ಕೆ ವಿರುದ್ಧಾರ್ಥ ಪ್ರಮೆ ಎಂಬುದು, ಇದು ಪ್ರಮಾಣ ಎನ್ನುವ ಪದದ ಮೂಲ). ಇದ್ಯಾವುದನ್ನು ಮಾಡದೆ ಇತರರು ನಂಬಿದ್ದೆಲ್ಲಾ ಸುಳ್ಳು ಎಂದು ಧಿಕ್ಕರಿಸಿ ಉದ್ಧಟತನ ತೋರಿದರೆ ಅದು ವಿತಂಡವಾದವೇ ಹೊರತು ವೈಜ್ಞಾನಿಕ ವಾದವಲ್ಲ. ತಮ್ಮ ವೈಯಕ್ತಿಕ ಮನೋಧೋರಣೆಯನ್ನು ಸಮಾಜದ ಮೇಲೆ ಆರೋಪಿಸಿ ಒಂದು ವರ್ಗದ ಮನ ನೋಯಿಸಿದರೆ ಅದು ಸರ್ವ ಹಿತಕಾರಿ ಕೆಲಸ ಅಲ್ಲ. ಇಂತಹ ಕಾರ್ಯಗಳು ಒಂದು ಬಗೆಯಾ ಬೌದ್ಧಿಕ ಭಯೋತ್ಪಾದನೆ ಎಂದೆನ್ನಲ್ಲಡ್ಡಿಯಿಲ್ಲ.
ಇದು ಸಮಾಜದಲ್ಲಿ ಕೋಲಾಹಲ ಮೂಡಿಸಿ ವರ್ಗಗಳ ನಡುವೆ ವೈಷಮ್ಯದ ಬೀಜ ಬಿತ್ತುವುದಲ್ಲದೆ ತಾರತಮ್ಯ ಭಾವವನ್ನೂ ಉಂಟುಮಾಡುತ್ತದೆ. ದೇವರ ಕಲ್ಪನೆಯ ಮೂಲಕ 'ಸರಕಾರೀ ಕೆಲಸ ದೇವರ ಕೆಲಸ' ಎಂದೆನ್ನುತ್ತೇವೆ. ಹಾಗಾದರೆ ವಿಧಾನ ಸೌಧದ ನಡುವೆ ಉಚ್ಚೆ ಮಾಡಲಾಗುವುದೇ?"ದೇಹವೇ ದೇಗುಲ' ಎಂದು ಕರೆಯುತ್ತೇವೆ ಹಾಗೆಂದು ನಮ್ಮ ಮೇಲೆ ನಾವೇ ಉಚ್ಚೆ ಮಾಡಿ ಕೊಳ್ಳಬಹುದೇ?
ಸಮಾಜಕ್ಕೆ, ಅದರ ಮೂಲಕ ವ್ಯಕ್ತಿಗಳಿಗೆ, ಭಾವನಾತ್ಮಕ, ಧಾರ್ಮಿಕ, ಸಾಂಸ್ಕೃತಿಕ,ನೈತಿಕ, ಕೌಟುಂಬಿಕ, ಸಂವೇದನಾಶೀಲ ಚೌಕಟ್ಟು ಅತೀ ಅವಶ್ಯಕ. ಏಕೆಂದರೆ ಎಲ್ಲರ ಮನೋರುಚಿ, ಮನೋನಿಗ್ರಹ, ಬೌದ್ಧಿಕ ಮತ್ತ ಒಂದೇರೀತಿ ಇರುವುದಿಲ್ಲ . ಎಲ್ಲರೂ ವಿಚಾರವಾದಿಗಳಾಗಿ ಆದರ್ಶ ಪರರಾಗಿ ಯೋಚಿಸುವುದಿಲ್ಲ. ಸಾಮಾನ್ಯವಾಗಿ ಒಪ್ಪುವಂತಹ , ಅಂಗೀಕರಿಸಿದಂತಹ ನಿಯಮಗಳಿಂದಲೇ ಸಮಾಜಕ್ಕೆ ಸುಸ್ಥಿ ತಿ ಇರುತ್ತದೆ. ಇದನ್ನು ಕಲಕುವ ಮುನ್ನ ಯೋಚನೆ ಮಾಡಬೇಕು. ವಿದ್ಯಾರ್ಥಿಗಳು ಒಂದೇ ಮಾದರಿಯಲ್ಲಿ ಕಲಿಯುವುದಿಲ್ಲ. ಅವರ ಕಲಿಕೆಯ ವಿಧಾನದಲ್ಲಿ ವೈವಿಧ್ಯತೆ ಸಹಜ. ಸಮಾಜವು ಹಾಗೆಯೇ ನಂಬಿಕೆಗಳ ವೈವಿಧ್ಯತೆಗಳ ಗೂಡು. ಇದು ಪ್ರಾಧ್ಯಾಪಕರಾದ ಇಬ್ಬರಿಗೂ ಗೊತ್ತಿರಬೇಕಾಗಿತ್ತು. ಆದರೆ ಅದನ್ನು ಅವರು ಮರೆತರು. ಕತ್ತೆ ಉಚ್ಚೆ ಹುಯ್ದಂತೆ ಗೊತ್ತು ಗುರಿ ಇಲ್ಲದೆ ಮಾತನಾಡಿದರು' ಎಂದ.
'ಹಾಗಾದರೆ ಬದಲಾವಣೆಗೆ ನಿನ್ನ ವಿರೋಧವೋ " ವಿಜಯ ಕೇಳಿದ.
'ಹಾಗೇನಿಲ್ಲ. ಬದಲಾವಣೆ ಕೆಲವೊಮ್ಮೆ ಧಿಢೀರ್ ಎಂತಲೂ, ಕೆಲವೊಮ್ಮೆ ಸಾವಧಾನವಾಗಿಯೂ ತರಬೇಕಾಗುತದೆ. ಯಾವುದು ಎಂಬುವುದು ಸಮಸ್ಯೆಯ ಗಹನತೆ, ಪ್ರಾಮುಖ್ಯತೆಯನ್ನು ಅವಲಂಬಿಸಿರುತ್ತದೆ. ಧನಾತ್ಮಕ ಪ್ರಕ್ರಿಯೆಗಳ ಮೂಲಕ ತರುವ ಬದಲಾವಣೆಗಳು ದೀರ್ಘಕಾಲಿಕ ಹಾಗೂ ಸಾರ್ವತ್ರಿಕ ಹಟ ಉಂಟುಮಾಡುತ್ತವೆ. ಋಣಾತ್ಮಕ ಕ್ರಿಯೆಗಳು ಅಪೇಕ್ಷಿಸಿದ ಬದಲಾವಣೆಯ ಬದಲು ವಿಧ್ವಂಸಕ ಪರಿಣಾಮಗಳನ್ನು ತರಬಹುದು''.
''ಸತ್ಯಂ ಬ್ರೂಯಾತ, ಪ್ರಿಯಂಬ್ರೂ ಯಾತ್ '' ಎಂದು ಸಂಸ್ಕೃತದಲ್ಲೂ, 'ನುಡಿದರೆ ಮುತ್ತಿನ ಹಾರದಂತಿರಬೇಕು' ಎಂದೂ ಬಸವಣ್ಣನವರು ಹೇಳಿದ್ದಾರೆ. ಅದನ್ನು ಬಿಟ್ಟು 'ನುಡಿದರೆ ಕೊಚ್ಚೆಯ ಗಟಾರದಂತಿರ' ಬಾರದು !! ನುಡಿಯೊಳಗಾಗಿ ನಡೆಯದ ಅನಂತಮೂರ್ತಿಯವರೂ , ಅದನ್ನು ಜಗಜ್ಜಾಹೀರು ಮಾಡಿದ ಕಲುಬುರ್ಗಿಯವರೂ ''ಸಾಹಿತಿ''ಗಳ ಮೂಲಭೂತ ಕರ್ತವ್ಯವನ್ನೇ ಮರೆತರು. ಭಾಷೆಯ ಮಾಧ್ಯಮದ ಮೂಲಕ ಸಾರ್ವತ್ರಿಕ ಹಿತದ ಪರಿಕಲ್ಪನೆಯೇ ಸಾಹಿತ್ಯ. ಇಬ್ಬರೂ ವಯೋ ವೃದ್ಧರಾದರೂ ಬುದ್ಧಿತಿಳಿದು ವರ್ತಿಸಲಿಲ್ಲವೆಂಬುದೇ ಖೇದದ ವಿಷಯ' ಎಂದು ಹೇಳಿ ನಿಲ್ಲಿಸಿದ.
''ಸರಿ ಬಿಡ್ರಪ್ಪ, ಸಮಾಜದಲ್ಲಿ ಹುಳಿಹಿಂಡಿದ್ದರಿಂದ ಹಾಗೂ ವಯಸ್ಸಾದರೂ ಬುದ್ಧಿ ಬರಲಿಲ್ಲವಾದ್ದರಿಂದ ''ಹುಣಿಸೆಕಾಯಿಗೆ ನಲ್ಲಿಕಾಯಿ ಸಾಕ್ಷಿ '' ಮತ್ತು ''ಹುಣಿಸೆ ಮುಪ್ಪಾದರೂ ಹುಳಿಗೆ ಮುಪ್ಪಿಲ್ಲ'' ಎಂಬ ಗಾದೆಗಳನ್ನು ಅಂಗೀಕರಿಸೋಣ ಏನಂತೀರಾ" ಎಂದ ವಿಜಯನ "ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು" ಮಾತಿಗೆ ಎಲ್ಲರೂ ತಲೆದೂಗಿ ಜಾಗ ಖಾಲಿ ಮಾಡಿದರು.
(ಇಲ್ಲಿ ವ್ಯಕ್ತ ಪಡಿಸಿದ ಅಭಿಪ್ರಾಯಗಳು ಲೇಖಕನದು)
ಆಕರ ಗ್ರಂಥಗಳು:
ಭಾರತೀಯ ತತ್ವಶಾಸ್ತ್ರದ ಪ್ರವೇಶ- ಪ್ರಭಾಕರ ಜೋಶಿ
ಭಾರತೀಯ ತತ್ವಶಾಸ್ತ್ರದ ರೂಪು ರೇಷೆಗಳು- ಹಿರಿಯಣ್ಣ ಮತ್ತು ಪ್ರಭುಶಂಕರ
ಎಂ ಎಂ ಕಲಬುರ್ಗಿ, ದೇವರು, ಯು ಆರ್ ಅನಂತಮೂರ್ತಿ, God, Kalburgi, U R Ananthamurthy, URA
ಸುದರ್ಶನ್ ಹರಟೆ ಕಟ್ಟೆ: ಓಬಿರಾಯನಿಂದ ಓಬಾಮವರೆಗೆ
ಬಿ ಎಂ ಶ್ರೀ ಅವರ "ಪದುಮ" – ಶ್ರೀವತ್ಸ ದೇಸಾಯಿಯವರಿಂದ ಒಂದು ಅನ್ವೇಷಣೆ
6 thoughts on "ಸುದರ್ಶನ್ ಹರಟೆ ಕಟ್ಟೆ: ಅನಂತಮೂರ್ತಿ ಉಚ್ಚೆಯೂ ಕಲುಬುರ್ಗಿಯ ಕಾಕ ರಚ್ಚೆಯೂ"
August 16, 2014 at 19:12
ಆತ್ಮೀಯ ಶ್ರೀಧರ್ ಅವರಿಗೆ.
ನಿಮ್ಮ ಪ್ರತಿಕ್ರಿಯೆಗೆ ಅನಂತ ನಮನಗಳು. ಲೇಖನವನ್ನು ಅಷ್ಟು ಆಸ್ಥೆಯಿಂದ ಓದಿ ಸಲಹೆ ನೀಡಿದ್ದಕ್ಕೆ ಧನ್ಯವಾದಗಳು. ನಿಜ, ನೀವೆಂದಂತೆ 'ಆಸ್ತಿಕ" ಎಂಬ ಪದದ ನಿಜಾರ್ಥ ದಲ್ಲಿ ನಾನು ಬಳಸಿಲ್ಲ, ಪ್ರಸ್ತುತ ಲೋಕಾರ್ಥದಲ್ಲಿ ಬಳಸಿದೆ. ವೈದಿಕ , ಅವೈದಿಕ ದರ್ಶನಗಳನ್ನು ವಿವರಿಸುತ್ತಾ, ಆಗಮಗಳ ಜೊತೆಗೆ ಹೋಲಿಸಿ ಮೂರ್ತಿಪೂಜೆಯ ಪರಿಕಲ್ಪನೆಯನ್ನು ಈ ಲೇಖನದ ಮೂಲಕ ವಿಷದ ಪಡಿಸುವುದು ನನ್ನ ಮೂಲ ಉದ್ದೇಶವಾಗಿತ್ತು. ಆದರೆ ಅದು ಸಂಕೀರ್ಣವಾಗುವುದೇನೋ ಎಂಬ ಅಂಜಿಕೆಯಿಂದ, ಸರಳೀಕರಿಸುವ ಸೋಂಬೇರಿತನದಿಂದ ಆ ವಿಷಯ ಸರಿಯಾಗಿ ರೂಪುಗೊಂಡಿಲ್ಲವೆಂಬುದು ನಿಜ.
ಸಾಂಖ್ಯ ಹಾಗೂ ನ್ಯಾಯ ವೈಶೇಷಿಕಗಳು ಬಾದರಾಯಣರ ವೇದಾಂತ ಸೂತ್ರದಲ್ಲಿ ಟೀಕಿಸಲ್ಪಟ್ಟಿವೆಯೆಂದು ಹೇಳುತ್ತಾರೆ ಇವು ವೇದವನ್ನು ಒಪ್ಪಿದರೂ ದೇವರನ್ನು ಒಪ್ಪವು. ವೇದಾಂತ ಸೂತ್ರಗಳು ವೇದಪಾರಮ್ಯವನ್ನು ಸಾರುವುದರಿಂದ, ವೇದಗಳನ್ನು ಅಪೌರುಷೇಯವಾಗಿ ನೋಡಿರುವುದರಿಂದ, ಅವು ಭಗವಂತನಿಂದ ಬಂದಿರುವುದರಿಂದ ಅವನನ್ನು ಅರಿಯಲು ವೇದಗಳ ಜೊತೆಗೆ ಉಪನಿಷತ್ ತತ್ವಗಳನ್ನು ಹೆಣೆದು ಬ್ರಹ್ಮಜ್ನ್ಜಾನ ಸಾಕಾರಕ್ಕೆ ದಾರಿಮಾಡಿರುವುದರಿಂದ ಅದು ಮುಂದೆ ಮತ ತತ್ವಕ್ಕೆ ಬುನಾದಿಯಾಗಿ ಮತ್ತೂ ಮುಂದೆ ಭಕ್ತಿಮಾರ್ಗಕ್ಕೆ ಬುನಾದಿ ಹಾಕಿದ್ದರಿಂದ ಸಾಮಾನ್ಯವಾಗಿ ದೇವರನ್ನು ನಂಬುವುದು, ವೇದಗಳನ್ನು ನಂಬುವುದು ಮತ್ತು ಆಸ್ತಿಕ ಮನೊಭಾವ ಎಲ್ಲವನ್ನು ಕಲಬೆರಕೆ ಮಾಡಿಕೊಂಡು ಬಳಸಲಾಗುತ್ತಿದೆ. ( ನಿಮಗೆ ತಿಳಿದಿದೆಯಾದರೂ,ಉಳಿದ ಓದುಗರ ಅನುಕೂಲಕ್ಕೆಂದು ಬರೆಯುತ್ತಿರುವೆ).
ಇಷ್ಟೊಂದು ತಿಳಿದಿರುವ ನೀವು ದಯವಿಟ್ಟು ಈ ವೇದಿಕೆಗೆ ಬರೆದು ವ್ಯಾಪ್ತಿ, ಅರಿವು, ಹರಿವು ಎಲ್ಲವನ್ನು ಶ್ರೀಮಂತಗೊಳಿಸಬೇಕೆಂದು ಕೋರುತ್ತಾ
ಶುಭ ಹಾರೈಕೆಗಳೊಂದಿಗೆ,
ಸುದರ್ಶನ.
makara says:
August 11, 2014 at 15:59
ಡಾ. ಸುದರ್ಶನ ಅವರೆ, ಉನ್ನತವಾದ ವಿಚಾರವನ್ನು ಮನಮುಟ್ಟುವಂತೆ ವಿವರಿಸಿದ್ದೀರ ಅದಕ್ಕಾಗಿ ಧನ್ಯವಾದಗಳು. ಭಾರತೀಯ ದರ್ಶನಗಳು ವೇದ ಪ್ರಮಾಣವನ್ನು ಒಪ್ಪದಿದ್ದವರನ್ನು ನಾಸ್ತಿಕರೆಂದರೇ ಹೊರತು, ದೇವರನ್ನು ಒಪ್ಪದೇ ಇರುವವರನ್ನಲ್ಲ. ಸಾಂಖ್ಯರು ಮತ್ತು ಜೈಮಿನಿಯ ಪೂರ್ವ ಮೀಮಾಂಸವೂ ಸಹ ದೇವರ ಅಸ್ತಿತ್ವವನ್ನು ಒಪ್ಪದೇ ಹೋದರೂ ಸಹ ಅವು ವೇದ ಪ್ರಮಾಣವನ್ನು ಒಪ್ಪಿಕೊಳ್ಳುತ್ತವೆ ಹಾಗಾಗಿ ಷಡ್ದರ್ಶನಗಳಾದ ನ್ಯಾಯ, ವೈಶೇಷಿಕ, ಸಾಂಖ್ಯ, ಯೋಗ, ಪೂರ್ವ ಮೀಮಾಂಸ ಮತ್ತು ಉತ್ತರ ಮೀಮಾಂಸ ಆಸ್ತಿಕ ದರ್ಶನಗಳೆಂದು ಮಾನ್ಯತೆ ಪಡೆದಿವೆ. ಈ ನಿಟ್ಟಿನಲ್ಲಿ ಲೇಖನದ ಅಭಿಪ್ರಾಯವನ್ನು ಸ್ವಲ್ಪ ಮಾರ್ಪಡಿಸ ಬಹುದೆನಿಸುತ್ತದೆ.
July 11, 2014 at 21:32
ಪ್ರತಿಕ್ರಿಯಿಸಿದ (ಹಾಗೂ ಓದಿರಬಹುದಾದ) ಎಲ್ಲರಿಗೂ ಧನ್ಯವಾದಗಳು. ರಾಜಾರಾಂ ಅವರ ಸಲಹೆ ಸೂಕ್ತವಾಗಿದೆ. ಅಭಿಪ್ರಾಯಗಳನ್ನು ಪಾತ್ರವರ್ಗಗಳಲ್ಲೇ ಉಳಿಸಿಬಿಡಬೇಕಿತ್ತು. ಮುಂದೆ ಅಳವಡಿಸಿಕೊಳ್ಳುತ್ತೇನೆ.
July 6, 2014 at 20:56
ಸುದರ್ಶನ್ ಅವರೆ,
ಗೆಳೆಯರು ನಡೆಸ್ಸಿದ ಚರ್ಚೆಯ ಮೂಲಕ ,ನಮ್ಮ ಉದ್ದಾಮ ಸಾಹಿತಿಗಳ ಹಲವು ದೌರ್ಬಲ್ಯಗಳನ್ನು ಯಶಸ್ವಿಯಾಗಿ ಹೊರತಂದಿದ್ದೀರಿ. ಅನಂತಮೂರ್ತಿ ಮತ್ತು ಭೈರಪ್ಪನವರ ವಾಗ್ವಾದಗಳು ನಮ್ಮೆಲ್ಲರಿಗೂ ಚಿರಪರಿಚಿತವೆ. ಆದರೆ ಅನಂತಮೂರ್ತಿಯವರು ಬಾಲ್ಯದಲ್ಲಿ ನಡೆಸಿದ ಚೇಷ್ಟೆಯನ್ನು ಸ್ನೇಹಿತ ಕಲುಬುರ್ಗಿಯವರು ಹೊರಹಾಕಿ, ಸಾಂಪ್ರದಾಯಿಕರನ್ನು ಕೆಣಕಿದ್ದ ವಿಚಾರ ನಿಮ್ಮ ಲೇಖನದಿಂದ ತಿಳಿಯಿತು. ಮೂರ್ತಿಪೂಜೆಯ ಸಂಸ್ಕೃತಿ ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದ ಆಚರಣೆಯಲ್ಲಿದೆ. ಇದನ್ನು ಅನುಸರಿಸುವುದೋ ಬಿಡುವುದೋ ಅದು ವ್ಯಕ್ತಿ ವಯಕ್ತಿಕ ವಿಷಯ. ಆದರೆ ಸಮಾಜದಲ್ಲಿನ ಹಿರಿಯ ವ್ಯಕ್ತಿಗಳು ತಮ್ಮ ವಿಚಾರಗಳನ್ನು ಹೊರಗೆಡಹ ಬೇಕಾದರೆ, ಎಚ್ಚರಿಕೆ ವಹಿಸುವುದು ಒಳ್ಳೆಯದು. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆಯಾದರೂ, ಸಮಾಜದಲ್ಲಿರುವ ಇತರರ ವಿಚಾರಗಳಿಗೆ ಸ್ವಲ್ಪ ಮಟ್ಟಿಗೆ ಸೂಕ್ಷ್ಮಸಂವೇದಿಯಾಗಿರುವುದು ಅವಶ್ಯಕವಾಗಿದೆ. ಹಿಂದೂ ಧರ್ಮದಲ್ಲಿ ಮೂರ್ತಿಪೂಜೆಗಿರುವ ಹಿರಿಯ ಸ್ಥಾನದ ಬಗ್ಗೆ ಉತ್ತಮ ತಿಳುವಳಿಕೆಯನ್ನು ನೀಡಿದ್ದೀರಿ. ಜೈನ ಮತ್ತು ಭೌದ್ಧ ಧರ್ಮಿಗಳು ಅದನ್ನು ಅನುಸರಿಸುತ್ತಿರುವ ವಿಷಯವೂ , ಮೂರ್ತಿಪೂಜೆಯ ಮೂಲಕ ನಮ್ಮ ದೇವಾಲಯಗಳಲ್ಲಿ ಇಂದು ಕಂಡು ಬರುವ ಶಿಲ್ಪಕಲೆಯ ಸಮೃದ್ಧಿ, ಮೂರ್ತಿ ಪೂಜೆಯ ಬೆಂಬಲಿಗರಿಗೆ ಅವರ ವಾದದಲ್ಲಿ ಒಂದು ಸಹಾಯಕಾರಿ ಅಂಶವಾಗಿದೆ. ಒಟ್ಟಿನಲ್ಲಿ, "ಅವರವರ ಭಾವಕ್ಕೆ ಅವರವರ ಭಕುತಿಗೆ" ಎಂಬಂತೆ, ಈ ಪ್ರಪಂಚದಲ್ಲಿ ಎಲ್ಲರಿಗೂ ತಮ್ಮ ತಮ್ಮ ರೀತಿಯಲ್ಲಿ ಧರ್ಮವನ್ನನುಸರಿಸುವ ಅಧಿಕಾರವಿದೆ. ಲೇಖನ ಈ ದಿಶೆಯಲ್ಲಿ ನಮ್ಮ ಮನಗಳನ್ನು ವಿಚಾರ ಮಾಡಲು ಪ್ರೇರಿಪಿಸುವಲ್ಲಿ ಯಶಸ್ವಿಯಾಗಿದೆ.
July 5, 2014 at 11:01
From ridiculous to sublime ಎನ್ನುವ ಮಾತು ನೆನಪಾಯಿತು. 'ಹಿರಿಯ' ಸಾಹಿತಿಗಳ ಜಗಳಾಟ ಹಾಗಿದ್ದರೆ ನಿಮ್ಮ ಬರವಣಿಗೆಯಲ್ಲಿ ಘನ ವಿಚಾರಗಳ ಚರ್ಚೆ ಮಾಡಿದ್ದು ಪೂರ್ವಾರ್ಧಕ್ಕೆ ಅನ್ವಯಿಸುತ್ತದೆ. ಎಂಥ ವಸ್ತುವಿನಲ್ಲೂ ಆಳವಾಗಿ ವಿಚಾರ ಮಾಡಿ ವಿಜಯನ ಹುಡುಗಾಟಿಕೆಯಲ್ಲಿ ತುಂಬಿರುವಿರಿ, ಭಲೆ!
July 5, 2014 at 17:16
ಸುದರ್ಶನ ಅವರ ಲೇಖನವು ಅದು ಅವಲೋಕಿಸುವ ವಸ್ತುವಿಷಯದ ಹಾಗೇ ಅವರ ಬರವಣಿಗೆಯು ಬಹು ಪ್ರೌಢವಾಗಿದೆ. ಎಸ್ ಎಲ್ ಭೈರಪ್ಪನವರ ಕಾದಂಬರಿ 'ಆವರಣ' ದಲ್ಲಿ ಬರುವ ಅಭಿಪ್ರಾಯಗಳನ್ನು ಪಾತ್ರಧಾರಿಗಳ ಮೂಲಕ ತಿಳಿಸುವಹಾಗೆ ಜಾಣತನವಿದೆ. 'ಆವರಣ' ದಲ್ಲಿ ಬರುವ ಒಬ್ಬ ಪಾತ್ರದಿಂದ ಕುಪಿತರಾಗಿ ಮಾನ್ಯ ಅನಂತಮೂರ್ತಿಯವರು ಭೈರಪ್ಪನವ ಕಾದಂಬರಿಯು ಐತಿಹಾಸಿಕವಾಗಿ ವಾಸ್ತವವಲ್ಲ ಎಂದು ಅದನ್ನು ಅಲ್ಲಗೆಳೆದರೆಂಬುದು ಒಂದು ಸಮಾಚಾರ. ಅದಕ್ಕೆ ಭೈರಪ್ಪನವರು, ಆ ಕಾದಂಬರಿಯಲ್ಲಿ ಬರುವ ಎಲ್ಲಾ ಪಾತ್ರಗಳು ಕೇವಲ ಕಾಲ್ಪನಿಕ ಎಂದು ಉತ್ತರಿಸಿ, ಯಾರಿಂದಲೂ ಮಾನನಷ್ಟ ಆಪಾದನೆಗೆ ಎಡೆಗೋಡಲಿಲ್ಲ. ಆದರೆ ಹಿಂದೂ ಧರ್ಮ‍ದ ತತ್ವವಿಚಾರಗಳನ್ನು ಪಾತ್ರಧಾರಿಗಳಿಂದ ಹೇಳಿಸಿ, ಸುದರ್ಶನ ಅವರು, 'ಇಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಲೇಖಕನದು' ಎಂದು ಹೇಳಿರುವುದರ ಬದಿಲು, 'ಇಲ್ಲಿ ಬರುವ ಪಾತ್ರಗಳೆಲ್ಲವೂ ಕೇವಲ ಕಾಲನಿಕ' ಎಂದು ಹೇಳಿದ್ದರೆ ಯಾರಿಂದಲೂ ಯಾವ ಆಪಾದನೆಗಳು ಬರುವ ಭೀತಿಯಿರುವುದಿಲ್ಲ.
ಕಪ್ಪತಗುಡ್ಡದ ಮೇಲೆ ಮತ್ತೆ ಗಣಿ ಉದ್ಯಮಿಗಳ ಕಣ್ಣು; ಚಿನ್ನದ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರದ ಚಿಂತನೆ ! – KANNADIGA WORLD
Home ಕನ್ನಡ ವಾರ್ತೆಗಳು ಕರ್ನಾಟಕ ಕಪ್ಪತಗುಡ್ಡದ ಮೇಲೆ ಮತ್ತೆ ಗಣಿ ಉದ್ಯಮಿಗಳ ಕಣ್ಣು; ಚಿನ್ನದ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರದ ಚಿಂತನೆ !
ಕಪ್ಪತಗುಡ್ಡದ ಮೇಲೆ ಮತ್ತೆ ಗಣಿ ಉದ್ಯಮಿಗಳ ಕಣ್ಣು; ಚಿನ್ನದ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರದ ಚಿಂತನೆ !
13/02/2020 By Special Correspondent 2 Mins Read
ಬೆಂಗಳೂರು: ಅಪಾರ ಜೀವ ವೈವಿಧ್ಯತೆಯ ಆಗರವಾಗಿರುವ ಕಪ್ಪತಗುಡ್ಡದ ಮೇಲೆ ಮತ್ತೆ ಗಣಿ ಉದ್ಯಮಿಗಳ ಕಣ್ಣು ಬಿದ್ದಿದೆ. ರಾಜ್ಯ ಸರ್ಕಾರ ಗದಗದ ಕಪ್ಪತ ಗುಡ್ಡದಲ್ಲಿ ಚಿನ್ನದ ಗಣಿಗಾರಿಕೆ ನಡೆಸಲು ಅನುಮತಿ ನೀಡಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗದಗ ಜಿಲ್ಲೆ ಕಪ್ಪತಗುಡ್ಡ 'ವನ್ಯಜೀವಿಧಾಮ'ಸ್ಥಾನಮಾನ ರದ್ದುಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಬಂದಿದೆ. 'ವನ್ಯಜೀವಿಧಾಮ ಸ್ಥಾನಮಾನವನ್ನು ರದ್ದುಗೊಳಿಸಲು ಪ್ರಭಾವಿ ಗಣಿ ಕಂಪನಿಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದು, ಇದಕ್ಕಾಗಿ ಸ್ಥಳೀಯರನ್ನೂ ಬಳಕೆ ಮಾಡಿಕೊಳ್ಳುತ್ತಿವೆ.
ಇಲ್ಲಿರುವ ಚಿನ್ನದ ಅದಿರು ನಿಕ್ಷೇಪದ ಮೇಲೆ ಈ ಕಂಪನಿಗಳ ಕಣ್ಣು ನೆಟ್ಟಿವೆ' ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ವನ್ಯಜೀವಿಧಾಮ ಸ್ಥಾನಮಾನವನ್ನು ರದ್ದು ಮಾಡಿದರೆ, ಅದರಿಂದ ಗಣಿಗಾರಿಕೆಗೆ ಅನುಕೂಲವಾಗುತ್ತದೆ. ಹೀಗಾಗಿ ಈ ಕಂಪನಿಗಳು ಜನರನ್ನು ಮುಂದಿಟ್ಟುಕೊಂಡು ಮರೆಯಿಂದ ಸಮರ ನಡೆಸುತ್ತಿವೆ.
ಗದಗ ಜಿಲ್ಲೆ ಒಣ ಪ್ರದೇಶವಾಗಿದ್ದು, ಜಿಲ್ಲೆಯಲ್ಲಿ ಶೇ 6 ರಷ್ಟು ಮಾತ್ರ ಅರಣ್ಯಭೂಮಿ ಇದೆ. ಕಪ್ಪತಗುಡ್ಡದಲ್ಲಿ ಶೇ 5 ರಷ್ಟು ಅರಣ್ಯವಿದೆ. ಒಟ್ಟು 32 ಸಾವಿರ ಹೆಕ್ಟೇರ್‌ನಲ್ಲಿ 25,000 ಹೆಕ್ಟೇರ್‌ ಅರಣ್ಯ ಶಿರಹಟ್ಟಿ ಮತ್ತು ಮುಂಡರಗಿ ತಾಲ್ಲೂಕುಗಳಲ್ಲಿ ವ್ಯಾಪಿಸಿದೆ.
ಈ ಪ್ರದೇಶವು ಅಪರೂಪದ ಗಿಡಮೂಲಿಕೆಗಳು ಮತ್ತು ಔಷಧಿಯ ಸಸ್ಯಗಳ ಆಗರ. ಅಲ್ಲದೇ, ವನ್ಯಜೀವಿಗಳ ಆವಾಸ ಸ್ಥಾನವೂ ಆಗಿದೆ. ನಂದಿವೇರಿ ಸಂಸ್ಥಾನ ಮಠದ ಶಿವಕುಮಾರ ಸ್ವಾಮೀಜಿ ಮತ್ತು ಇತರ ಪ್ರಮುಖರ ಹೋರಾಟದ ಪರಿಣಾಮ ಈ ಪ್ರದೇಶ ಮೂಲ ಸ್ವರೂಪದಲ್ಲಿ ಉಳಿದುಕೊಳ್ಳಲು ಸಾಧ್ಯವಾಗಿದೆ.
ವನ್ಯಜೀವಿಧಾಮ ಸ್ಥಾನಮಾನ ಹಿಂದಕ್ಕೆ ಪಡೆಯುವಂತೆ ಕಾಣದ ಕೈಗಳ ಒತ್ತಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವನ್ಯಜೀವಿಧಾಮ ಎಂದು ಘೋಷಿಸಿದ ಅಧಿಸೂಚನೆಯನ್ನು ಡಿನೋಟಿಫೈ ಮಾಡುವಂತೆ ಸಲ್ಲಿಕೆಯಾದ ಕಡತ ಮುಖ್ಯಮಂತ್ರಿ ಅವರ ಮುಂದೆ ಬಂದಿದೆ.
ಇದಕ್ಕೆ ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಾದರೂ ಇಲ್ಲಿ ಹಾದಿ ಸುಗಮ ಮಾಡಿಕೊಂಡರೆ, ಕೇಂದ್ರದಲ್ಲಿ ನಿಭಾಯಿಸಬಹುದು ಎಂಬುದು ಗಣಿ ಕಂಪನಿಗಳ ಲೆಕ್ಕಾಚಾರ ಎನ್ನುತ್ತವೆ ಮೂಲಗಳು.
ವನ್ಯಜೀವಿ ಧಾಮದಲ್ಲಿ ಜಾನುವಾರುಗಳಿಗೆ ಮೇಯಲು ಅವಕಾಶ ನೀಡಲಾಗುತ್ತಿಲ್ಲ. ಅದಕ್ಕೆ ಅವಕಾಶ ನೀಡಲು ವನ್ಯಜೀವಿಧಾಮ ಸ್ಥಾನಮಾನ ರದ್ದು ಮಾಡಬೇಕು ಎಂಬ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಲ್ಡೋಟಾ ಕಂಪನಿ ಸುಮಾರು 20 ವರ್ಷಗಳಷ್ಟು ಹಿಂದೆ ಇಲ್ಲಿ ಚಿನ್ನದ ನಿಕ್ಷೇಪ ಇದೆಯೆ ಎಂಬ ಸಮೀಕ್ಷೆ ಮಾಡಿಸಿತ್ತು. ಆ ಪ್ರಕಾರ, ಈ ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಚಿನ್ನ ಇರುವುದು ಪತ್ತೆ ಆಗಿತ್ತು ಎಂದು ಮೂಲಗಳು ತಿಳಿಸಿವೆ.
ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜು ಖಾನಪ್ಪನವರ್ ಹೇಳಿದ್ದಾರೆ. ಸದ್ಯ ಗಣಿಗಾರಿಕೆ ಚೆಂಡು ಯಡಿಯೂರಪ್ಪ ಅವರ ಮುಂದಿದೆ. ಗದಗ ಜನತೆ ಕಪ್ಪತಗುಡ್ಡವನ್ನು ರಕ್ಷಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ವನ್ಯಜೀವಿ ಅಭಯಾರಣ್ಯ ಟ್ಯಾಗ್ ತೆಗೆಯಬೇಕು ಎಂದು ಕೆಲವು ಮಂದಿ ಒತ್ತಾಯಿಸಿದ್ದಾರೆಂದು ಗದಗ ಅರಣ್ಯಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಅರಣ್ಯ ಸಚಿವರು ಸಿಎಂ ಜೊತೆ ಚರ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಈ ಸಂಬಂಧ ಅರಣ್ಯಾಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪದೇ ಪದೇ ಭಾರತದ ಕೋವ್ಯಾಕ್ಸಿನ್ ಅನುಮೋದನೆಗೆ ಹಿನ್ನಡೆ; WHO ಜೊತೆ ಸಭೆ | Bharat Biotech To Hold Covaxin Pre Submission Meeting With WHO - Kannada Oneindia
2 min ago Breaking: ಭಾರತದಲ್ಲಿ ಕೊರೊನಾದಿಂದ 30 ನಿಮಿಷಕ್ಕೆ ಒಬ್ಬರು ಸಾವು!
8 min ago ಬಿಜೆಪಿ ಬಂದ ರಸ್ತೆ ಮೇಲೆ ನಮಾಜ್‌ ನಿಲ್ಲಿಸಿದ್ದೇವೆ: ಯೋಗಿ
| Published: Thursday, June 17, 2021, 10:56 [IST]
ನವದೆಹಲಿ, ಜೂನ್ 17: ಹೈದರಾಬಾದ್ ಮೂಲದ ಲಸಿಕೆ ತಯಾರಕ ಸಂಸ್ಥೆ ಭಾರತ್ ಬಯೋಟೆಕ್‌ಗೆ ಪದೇ ಪದೇ ಅಡ್ಡಿ ಎದುರಾಗುತ್ತಲೇ ಇದೆ. ವಿದೇಶಗಳಲ್ಲಿ ತನ್ನ ಕೋವ್ಯಾಕ್ಸಿನ್‌ ಲಸಿಕೆಗೆ ಅನುಮೋದನೆ ಪಡೆಯುವಲ್ಲಿ ಭಾರತ್ ಬಯೋಟೆಕ್ ಹಿನ್ನಡೆ ಅನುಭವಿಸುತ್ತಲೇ ಇದೆ. ಹೀಗಾಗಿ ತನ್ನ ಕೋವ್ಯಾಕ್ಸಿನ್ ಲಸಿಕೆ ಅನುಮೋದನೆ ಸಂಬಂಧ ಮುಂದಿನ ಬುಧವಾರ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಪೂರ್ವ ಸಲ್ಲಿಕೆ ಸಭೆ ನಡೆಸಲಿದೆ.
ತನ್ನ ಕೋವ್ಯಾಕ್ಸಿನ್ ಲಸಿಕೆಯ ಅನುಮೋದನೆಗೆ ಸಂಬಂಧಿಸಿದಂತೆ ಜೂನ್ 23ರಂದು ಸಭೆ ನಡೆಸಲಿದ್ದು, ಇನ್ನಷ್ಟು ಮಾಹಿತಿಗಳನ್ನು ಒದಗಿಸುವುದಾಗಿ ತಿಳಿಸಿದೆ. ಲಸಿಕೆಯ ಮೂರನೇ ಹಂತದ ಪ್ರಾಯೋಗಿಕ ದತ್ತಾಂಶ ಕೊರತೆ ಕಾರಣವಾಗಿ ಕೋವ್ಯಾಕ್ಸಿನ್‌ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಲು ಹಿಂದೇಟು ಹಾಕಿದೆ. ಈ ದತ್ತಾಂಶ, ಲಸಿಕೆಯ ರಫ್ತಿಗೆ ಹಾಗೂ ಲಸಿಕೆ ಪಾಸ್‌ಪೋರ್ಟ್‌ ಪಡೆದುಕೊಳ್ಳಲು ಅತ್ಯವಶ್ಯಕವಾಗಿದೆ. ಮುಂದೆ ಓದಿ...
ಲಸಿಕೆಗೆ ಸಂಪೂರ್ಣ ಅನುಮೋದನೆ ದೊರೆತಿಲ್ಲ
ಜುಲೈ ತಿಂಗಳಿನಲ್ಲಿ ಕೋವ್ಯಾಕ್ಸಿನ್ ಲಸಿಕೆಯ ದತ್ತಾಂಶವನ್ನು ಸಾರ್ವಜನಿಕಗೊಳಿಸುವುದಾಗಿ ಭಾರತ್ ಬಯೋಟೆಕ್ ಈ ಹಿಂದೆ ಎಎನ್‌ಐಗೆ ತಿಳಿಸಿತ್ತು. ಅದರ ನಂತರ ಕಂಪನಿಯು ಭಾರತದಲ್ಲಿ ಕೊರೊನಾ ಲಸಿಕೆಯ ಸಂಪೂರ್ಣ ಪರವಾನಗಿಗೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿಸಿತ್ತು. ಲಸಿಕೆಯ ನೈಜ ದಕ್ಷತೆ ಪರೀಕ್ಷಿಸಲು ಹಾಗೂ ವೈಜ್ಞಾನಿಕ, ಪರಿಣಾಮಕಾರಿ ಅಂಶಗಳ ಮಾನದಂಡಗಳನ್ನು ಪೂರೈಸಲು ನಾಲ್ಕನೇ ಹಂತದ ಪ್ರಯೋಗಗಳನ್ನು ಸಹ ನಡೆಸಲಾಗುತ್ತದೆ ಎಂದು ಸಂಸ್ಥೆ ಹೇಳಿದೆ.
ಕೋವ್ಯಾಕ್ಸಿನ್ ಅರ್ಜಿ ತಿರಸ್ಕರಿಸಿದ್ದ FDA
ಪ್ರಸ್ತುತ ಕೋವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗಾಗಿ ಭಾರತೀಯ ಔಷಧ ನಿಯಂತ್ರಕ ಸಂಸ್ಥೆ ಡಿಸಿಜಿಐ ಅನುಮೋದನೆ ನೀಡಿದ್ದು, ಭಾರತದಲ್ಲಿ ಈ ಲಸಿಕೆಯನ್ನು ಎಲ್ಲೆಡೆ ನೀಡಲಾಗುತ್ತಿದೆ. ಆದರೆ ಈಚೆಗೆ ಲಸಿಕೆಯ ವೈದ್ಯಕೀಯ ಪ್ರಯೋಗಗಳ ಮಾಹಿತಿ ಕೊರತೆಯನ್ನು ಉಲ್ಲೇಖಿಸಿದ್ದ ಅಮೆರಿಕದ ಆಹಾರ ಹಾಗೂ ಔಷಧ ನಿಯಂತ್ರಕ ಸಂಸ್ಥೆ, ಈ ಲಸಿಕೆಯ ತುರ್ತು ಬಳಕೆಯ ದೃಢೀಕರಣಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಇದು ವಿದೇಶಗಳಲ್ಲಿ ಅನುಮೋದನೆ ಪಡೆಯಲು ಕೋವ್ಯಾಕ್ಸಿನ್‌ ಗೆ ಅಡೆತಡೆಗಳನ್ನು ಉಂಟು ಮಾಡಿದೆ.
ಕೋವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗಳನ್ನು ಲಸಿಕೆ ಪಡೆಯದವರೆಂದು ಪರಿಗಣನೆ
ಗಡಿಗಳಾಚೆಗೆ ಕೋವ್ಯಾಕ್ಸಿನ್ ಲಸಿಕೆ ರಫ್ತು ಮಾಡಲು WHO ಅನುಮೋದನೆ ಅವಶ್ಯಕವಾಗಿದ್ದು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಭಾರತ್ ಬಯೋಟೆಕ್‌ಗೆ ಅಡೆತಡೆ ಉಂಟಾಗಿದೆ. ಜೊತೆಗೆ ಭಾರತದಲ್ಲಿ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡವರನ್ನು ವಿದೇಶಿ ವಿಶ್ವವಿದ್ಯಾಲಯಗಳು ಲಸಿಕೆ ಹಾಕದವರು ಎಂದು ಪರಿಗಣಿಸುತ್ತಿರುವುದಾಗಿ ಎಬಿವಿಪಿ ತಿಳಿಸಿದೆ. ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳು ಸೇರಿದಂತೆ ಹಲವು ದೇಶಗಳು ಕೊವಾಕ್ಸಿನ್ ಲಸಿಕೆ ಪಡೆದ ಭಾರತೀಯರನ್ನು ಲಸಿಕೆ ಹಾಕಿಸಿಕೊಳ್ಳದವರು ಎಂದು ಪರಿಗಣಿಸುತ್ತವೆ ಎಂದು ಎಬಿವಿಪಿ ವಿವರಿಸಿದೆ.
500 ಕೋಟಿ ರೂ ಬಂಡವಾಳ ಹೂಡಿಕೆ
ಲಸಿಕೆಯ ಅಭಿವೃದ್ಧಿ, ಕ್ಲಿನಿಕಲ್ ಪ್ರಯೋಗಗಳು ಮತ್ತು ಲಸಿಕೆ ಉತ್ಪಾದನೆಯ ಸೌಲಭ್ಯಗಳ ನಿರ್ಮಾಣಕ್ಕೆ ಭಾರತ್ ಬಯೋಟೆಕ್ ಕಂಪನಿ ಕನಿಷ್ಠ 500 ಕೋಟಿ ರೂ ಹೂಡಿಕೆ ಮಾಡಿದೆ. ಕಂಪನಿ ಪ್ರಕಾರ ಭಾರತದಲ್ಲಿ ಇಲ್ಲಿಯವರೆಗೆ ಕನಿಷ್ಠ 40 ದಶಲಕ್ಷ ಡೋಸ್ ಕೋವ್ಯಾಕ್ಸಿನ್ ಸರಬರಾಜು ಮಾಡಲಾಗಿದೆ. ಹೊಸ ರೂಪಾಂತರಗಳ ವಿರುದ್ಧವೂ ಲಸಿಕೆಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.
coronavirus india vaccine health who ವೈರಸ್ ಕೊರೊನಾ ಲಸಿಕೆ ಲಸಿಕೆ ಆರೋಗ್ಯ ಭಾರತ ವಿಶ್ವ ಆರೋಗ್ಯ ಸಂಸ್ಥೆ
Hyderabad based vaccine manufacturer Bharat Biotech will hold its pre-submission meeting with WHO on June 23 regarding the approval of Covaxin
ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯದ ತನಿಖೆ? | Prajavani
₹8.60 ಕೋಟಿ ಹಣದ ಮೂಲ ಪತ್ತೆಗೆ ಮುಂದಾದ ಇ.ಡಿ
Updated: 21 ಜೂನ್ 2018, 23:07 IST
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮತ್ತು ಅವರ ಆಪ್ತರಿಗೆ ಸೇರಿರುವ ದೆಹಲಿಯ ಆರ್‌.ಕೆ. ಪುರಂನ ಮನೆ ಹಾಗೂ ಸಫ್ದರ್‌ಜಂಗ್‌ ಎನ್‌ಕ್ಲೇವ್‌ ಫ್ಲ್ಯಾಟ್‌ಗಳಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ₹ 8.60 ಕೋಟಿಯ ಮೂಲ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವ ಸಾಧ್ಯತೆಯಿದೆ.
ಇಲ್ಲಿನ ವಿಶೇಷ ಆರ್ಥಿಕ ಅಪರಾಧಗಳ ವಿಚಾರಣಾ ನ್ಯಾಯಾಲಯಕ್ಕೆ ಐ.ಟಿ ಅಧಿಕಾರಿಗಳು ಸಲ್ಲಿಸಿರುವ 33 ಪುಟಗಳ ದೂರಿನಲ್ಲಿ, ಶಿವಕುಮಾರ್‌, ಅವರ ವ್ಯವಹಾರಗಳ ಪಾಲುದಾರರಾದ ಸಚಿನ್‌ ನಾರಾಯಣ್‌, ಸುನಿಲ್‌ ಕುಮಾರ್‌ ಶರ್ಮ, ದೆಹಲಿ ಕರ್ನಾಟಕ ಭವನದ ನೌಕರ ಆಂಜನೇಯ ಹಾಗೂ ಸುಖದೇವ್‌ ವಿಹಾರದ ನಿವಾಸಿ ರಾಜೇಂದ್ರ ಅವರು ಹಣದ ಮೂಲದ ಬಗ್ಗೆ ವಿಭಿನ್ನ ಹೇಳಿಕೆ ನೀಡಿರುವುದರಿಂದ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಬಹುದು ಎಂದು ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.
'ಜಾರಿ ನಿರ್ದೇಶನಾಲಯವು ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲು ಅವಕಾಶವಿದೆ. ಲೇವಾದೇವಿ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಮೊಕದ್ದಮೆ ದಾಖಲಿಸಿ, ವಿಚಾರಣೆಗಾಗಿ ಶಿವಕುಮಾರ್‌ ಮತ್ತು ಅವರ ಆಪ್ತರನ್ನು ಬಂಧಿಸುವ ಸಾಧ್ಯತೆಯೂ ಇದೆ. ಇದರಿಂದ ಪಾರಾಗಲು ತಕ್ಷಣವೇ ಸಚಿವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬಹುದು' ಎಂದೂ ಮೂಲಗಳು ತಿಳಿಸಿವೆ.
'ದೆಹಲಿಯ ಆರ್.ಕೆ.ಪುರಂ ಮನೆ ಹಾಗೂ ಸಫ್ದರ್‌ಜಂಗ್‌ ಫ್ಲ್ಯಾಟ್‌ಗಳಲ್ಲಿ ಸಿಕ್ಕಿರುವ ಹಣ ಸಚಿವರಿಗೆ ಸೇರಿದ್ದು' ಎಂದು ಅವರ ಆಪ್ತ ಆಂಜನೇಯ ಹೇಳಿದ್ದಾರೆ. 'ಇದು ತಮ್ಮ ಹಣ' ಎಂದು ಶರ್ಮ ಹೇಳಿಕೊಂಡಿದ್ದಾರೆ. 'ಇದರಲ್ಲಿ ಭಾಗಶಃ ಕೃಷಿಯಿಂದ ಬಂದಿರುವ ಆದಾಯ' ಎಂದು ಶಿವಕುಮಾರ್‌ ಹೇಳಿದ್ದಾರೆ. ಆದರೆ, ಹಣದ ಮೂಲವನ್ನು ಯಾರೂ ಖಚಿತವಾಗಿ ಬಹಿರಂಗಪಡಿಸಿಲ್ಲ ಎಂದು ಐ.ಟಿ ಅಧಿಕಾರಿಗಳು ದೂರಿನಲ್ಲಿ ತಿಳಿಸಿದ್ದಾರೆ.
'ಸುನೀಲ್‌ ಕುಮಾರ್‌ ಶರ್ಮಾ ದೆಹಲಿ ಅಥವಾ ಸುತ್ತಮುತ್ತ ಯಾವುದೇ ವ್ಯವಹಾರ ನಡೆಸುತ್ತಿಲ್ಲ. ಅವರಿಗೆ ಸೇರಿದ ಫ್ಲ್ಯಾಟ್‌ನಿಂದ ವಶಪಡಿಸಿಕೊಂಡಿರುವ ₹ 6.68 ಕೋಟಿಯನ್ನು ಬೆಂಗಳೂರಿನಿಂದ ದೆಹಲಿಗೆ ಏಕೆ ಸಾಗಿಸಲಾಯಿತು. ಏಕೆ ಅಲ್ಲಿಡಲಾಗಿತ್ತು ಎಂಬ ಮಾಹಿತಿಯನ್ನು ಐ.ಟಿ ಅಧಿಕಾರಿಗಳಿಗೆ ನೀಡಿಲ್ಲ. ಈ ಎಲ್ಲ ಸಂಗತಿಗಳನ್ನು ಗಮನಿಸಿದರೆ ಆದಾಯ ತೆರಿಗೆ ವಂಚಿಸಲು ಸಚಿವರಿಗೆ ಶರ್ಮ ಪ್ರಚೋದನೆ ನೀಡಿರುವುದು ಮೇಲ್ನೋಟಕ್ಕೆ ಕಾಣುವಂತಿದೆ ಎಂದು ದೂರಿನಲ್ಲಿ ಹೇಳಿದೆ.
'ಶರ್ಮ, ಹಲವು ಹಣಕಾಸು ವ್ಯವಹಾರದಲ್ಲಿ ತೆರಿಗೆ ವಂಚಿಸಿದ್ದಾರೆ. ದಾಳಿ ವೇಳೆ ವಶಪಡಿಸಿಕೊಂಡಿರುವ ಡೈರಿ ಹಾಗೂ ಐದನೇ ಆರೋಪಿ ರಾಜೇಂದ್ರ ನೀಡಿರುವ ಹೇಳಿಕೆಯಲ್ಲಿ ಒಪ್ಪಿಕೊಂಡಿರುವಂತೆ ಹಣಕ್ಕೆ ಕೆ.ಜಿ ಎಂಬ ಸಂಕೇತಾಕ್ಷರ ಬಳಸಲಾಗಿದೆ. ಆ ಮೂಲಕ ಹವಾಲಾ ವ್ಯವಹಾರ ನಡೆಸಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆದಾಯ ತೆರಿಗೆ ಇಲಾಖೆಯು ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಅಧಿಕಾರ ಅದಕ್ಕಿಲ್ಲ. ಹೀಗಾಗಿ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಒಮ್ಮೆ ಪ್ರಕರಣ ಕೈಗೆತ್ತಿಕೊಂಡು, ಎಫ್‌ಐಆರ್‌ ದಾಖಲಿಸಿದರೆ ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕುವ ಸಂಭವವಿದೆ.
ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್! - Uttaraprabha.com
ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ ವೃದ್ಧ ಮಹಿಳೆಯ ಮೇಲೆ ಹರಿಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ನನ್ನು ಸದ್ಯ ಬಂಧಿಸಲಾಗಿದೆ. ಪೂರ್ವ ದೆಹಲಿಯ ಘಾಜಿಪುರ ಪ್ರದೇಶದ ಚಿಲ್ಲಾ ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮದ್ಯಪಾನ ಮಾಡಿ ಸಬ್ ಇನ್ಸ್ ಪೆಕ್ಟರ್ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಿರುವಾಗ ರಸ್ತೆ ಬದಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಚಾಲನೆಯಲ್ಲಿ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಾಯಿಸಿ ಮಹಿಳೆಯ ಮೇಲೆ ಹರಿಸಿದ್ದಲ್ಲದೆ ಕಾರಿನಡಿ ಮಹಿಳೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಗೊತ್ತಾದಾಗ ತಪ್ಪಿಸಿಕೊಂಡು ಹೋಗಲು ಸಬ್ ಇನ್ಸ್ ಪೆಕ್ಟರ್ ಯತ್ನಿಸಿದ್ದಾನೆ.
ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಸಹಾಯದಿಂದ ಆರೋಪಿ ಸಬ್ ಇನ್ಸ್ ಪೆಕ್ಟರ್ ನನ್ನು ಬಂಧಿಸಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯಪಾನ ಮಾಡಿ ಮಹಿಳೆ ಮೇಲೆ ಕಾರು ಚಲಾಯಿಸಿ ಜೀವಕ್ಕೆ ಕುತ್ತು ತಂದ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ವಿರುದ್ಧ ಕೇಸು ದಾಖಲಾಗಿದೆ.
ರೈತರಿಗೆ ಖಾರವಾಯ್ತು ಮೆಣಸಿನಕಾಯಿ: ಕಂಗಾಲದ ಬೆಳೆಗಾರರು
ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ.
ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ
ದಿನದ ಅಪರಾಧಗಳ ಪಕ್ಷಿನೋಟ 10 ನೇ ಸೆಪ್ಟೆಂಬರ್‌ 2015 | ಕೆ.ಜಿ.ಎಫ್ ಪೊಲೀಸ್